Breaking News

ತೆಲಂಗಾಣ: ಒಂದೇ ವರ್ಷದಲ್ಲಿ 55 ಸಾವಿರ ಸರ್ಕಾರಿ ನೌಕರರ ನೇಮಕ; ಮುಖ್ಯಮಂತ್ರಿ ರೇವಂತ್ ರೆಡ್ಡಿ

ಹೈದರಾಬಾದ್: ಒಂದೇ ವರ್ಷದಲ್ಲಿ 55,143 ಸರ್ಕಾರಿ ನೌಕರರನ್ನು ನೇಮಕ ಮಾಡುವ ಮೂಲಕ ತಮ್ಮ ಸರ್ಕಾರ ದೇಶದಲ್ಲಿಯೇ ಅಭೂತಪೂರ್ವ ಸಾಧನೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಹೇಳಿದ್ದಾರೆ.
ರಾಜೀವ್‌ ಗಾಂಧಿ ನಾಗರಿಕ ಸೇವಾ ಅಭಯ ಹಸ್ತಂ’ ಯೋಜನೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ₹1 ಲಕ್ಷ ಚೆಕ್‌ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗ ನೇಮಕಾತಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿಯೇ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇದ್ದ 55,143 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇದು ದೇಶದಲ್ಲಿಯೇ ಅಭೂತಪೂರ್ವ ಸಾಧನೆಯಾಗಿದೆ. ತೆಲಂಗಾಣ ರಾಷ್ಟ್ರಕ್ಕೆ ಮಾದರಿಯಾಗಿದೆ’ ಎಂದು ಅವರು ಹೇಳಿದ್ದಾರೆ.
ಕಳೆದ 14 ವರ್ಷಗಳಿಂದ ಗ್ರೂಪ್‌ 1 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿಲ್ಲ. ಖಾಲಿ ಇರುವ 563 ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಮಾರ್ಚ್‌ 31ರೊಳಗೆ ಗ್ರೂಪ್‌ 1 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ರೆಡ್ಡಿ ತಿಳಿಸಿದ್ದಾರೆ.
ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರಸ್ತುತ ಬಿಹಾರದ ವಿದ್ಯಾರ್ಥಿಗಳು ನಾಗರಿಕ ಸೇವೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಧನೆ ಮಾಡುತ್ತಿದ್ದಾರೆ. ತೆಲಂಗಾಣದಿಂದ ಹೆಚ್ಚಿನ ಅಭ್ಯರ್ಥಿಗಳು ನಾಗರಿಕ ಸೇವಾ ಪರೀಕ್ಷೆಗಳಿಗೆ ಆಯ್ಕೆಯಾಗಬೇಕೆಂಬುದು ತಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ರೇವಂತ್‌ ರೆಡ್ಡಿ ಹೇಳಿದ್ದಾರೆ.
ತೆಲಂಗಾಣದ ನಾಗರಿಕ ಸೇವಾ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ವಿಯಾಗಲು ‘ರಾಜೀವ್ ಗಾಂಧಿ ನಾಗರಿಕ ಸೇವೆಗಳ ಅಭಯ ಹಸ್ತಂ’ ಕಾರ್ಯಕ್ರಮದ ಮೂಲಕ ಸರ್ಕಾರವು ₹1 ಲಕ್ಷ ಆರ್ಥಿಕ ನೆರವು ನೀಡುತ್ತಿದೆ. ಆಕಾಂಕ್ಷಿಗಳು ಈ ಆರ್ಥಿಕ ಸಹಾಯವನ್ನು ಸರ್ಕಾರದ ಪ್ರೋತ್ಸಾಹವೆಂದು ಪರಿಗಣಿಸಬೇಕು ಎಂದು ಅವರು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *