Breaking News

ಒಳ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *