Breaking News

ರಾಜ್ಯಕ್ಕೆ ಕಾಲಿಟ್ಟ ಹೆಚ್ಎಂಪಿವಿ ವೈರಸ್: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ

ಬೆಂಗಳೂರು : ಕರ್ನಾಟಕಕ್ಕೂ HMPV ವೈರಸ್ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ.
ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ.
ಇಂದು ಸಚಿವರು ಸಭೆ ಕರೆದಿದ್ದು, ವೈರಸ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ವೈರಸ್ ಬಗ್ಗೆ ಜಾಗೃತಿ ವಹಿಸಲು ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.
ಮಗುವಿಗೆ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ವೇಳೆ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್ ಎಂಪಿವಿ ವೈರಸ್ ಇರುವುದು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚೀನಾದಲ್ಲಿ HMPV ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇದು ಕೋವಿಡ್-19 ನಂತಹ ಗಂಭೀರ ಪರಿಸ್ಥಿತಿಗೆ ಕಾರಣವಾಗುತ್ತಿಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೂ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಎಚ್ಚರಿಕೆ ವಹಿಸುವುದು ಮುಖ್ಯವಾಗಿದೆ. ಚೀನಾದಲ್ಲಿ ಇದುವರೆಗೆ 300 ಕ್ಕೂ ಹೆಚ್ಚು ಮಂದಿ ಈ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆ ಭಾರತಕ್ಕೂ ಆತಂಕ ಶುರುವಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *