Breaking News

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ. ಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ 1 ಲೀಟರ್ ಡೀಸೆಲ್ ಅನ್ನು ₹30ರಿಂದ ₹40ಕ್ಕೆ ಕೊಡಬಹುದು.
ರಿಲಯನ್ಸ್ ಪೆಟ್ರೋಲ್ ಬಂಕ್ ಉಳಿಯಬೇಕು ಎನ್ನುವ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ ಮಾಡುತ್ತಿಲ್ಲ’ ಎಂದು ಟೀಕಿಸಿದರು.
ದಿನಕ್ಕೆ 1.16 ಕೋಟಿ ಜನರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ 5,300 ಹೊಸ ಬಸ್‌ ಖರೀದಿಸಲಾಗಿದೆ. 8 ಸಾವಿರ ಸಾರಿಗೆ ಸಿಬ್ಬಂದಿ ನೇಮಕಕ್ಕೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಈಗಾಗಲೇ 4ರಿಂದ 5 ಸಾವಿರ ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹೀಗಾಗಿ ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಮರ್ಥಿಸಿಕೊಂಡರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *