Breaking News

ಬೀದರ್: ಪ್ರತಿ ಕ್ವಿಂಟಾಲ್ ತೊಗರಿಗೆ ₹12 ಸಾವಿರ ನೀಡಿ; ರಾಜ್ಯ ರೈತ ಸಂಘದಿಂದ ಮನವಿ

ಬೀದರ್‌: ‘ಪ್ರತಿ ಕ್ವಿಂಟಲ್‌ ತೊಗರಿಗೆ ಕೇಂದ್ರ ಸರ್ಕಾರ ₹7,550 ನೀಡುತ್ತಿದೆ. ರಾಜ್ಯ ಸರ್ಕಾರ ಅದಕ್ಕೆ ₹4,500 ಸಹಾಯ ಧನ ಸೇರಿಸಿ, ಒಟ್ಟು ₹12,050 ನೀಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಂಘದ ಮುಖಂಡರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಮಳೆಗೆ ತೊಗರಿ ಬೆಳೆ ಸಂಪೂರ್ಣ ಹಾಳಾಗಿದೆ. ಅದಕ್ಕೆ ಶೀಘ್ರ ಪರಿಹಾರ ಒದಗಿಸಬೇಕು. ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದವರ ಸೋಯಾಬಿನ್ ಖರೀದಿಸಬೇಕು. ಉದ್ದು, ಸೋಯಾ, ತೊಗರಿಗೆ ವಿಮೆ ಕಟ್ಟಿರುವ ರೈತರಿಗೆ ಬೆಳೆ ವಿಮೆ ಪರಿಹಾರ ಪಾವತಿಸಬೇಕು. ಡಿಸಿಸಿ ಬ್ಯಾಂಕಿನವರು ರೈತರಿಗೆ ಸೌಲ ಸೌಲಭ್ಯ ಒದಗಿಸಬೇಕು. ಜಿಲ್ಲೆಯ ಎಲ್ಲ ಪಿಕೆಪಿಎಸ್‌ಗಳಲ್ಲಿ ಖರೀದಿ ಕೇಂದ್ರ ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಮುಖಂಡರಾದ ಸುಭಾಷ ರಗಟೆ, ಬಾಬುರಾವ ಜೋಳದಾಬಕೆ, ಶಂಕರೆಪ್ಪ ಪಾರಾ, ಸಿದ್ರಾಮಪ್ಪ ಬಾಲಕುಂದೆ, ಪ್ರವೀಣ ಕುಲಕರ್ಣಿ, ನಾಗಯ್ಯಾ ಸ್ವಾಮಿ, ಬಸವಂತ ಡೊಂಗರಗಾ, ಬಸಪ್ಪಾ ಆಲೂರೆ, ಶಿವಾನಂದ ಹುಡಗೆ ಉಪಸ್ಥಿತರಿದ್ದರು.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *