Breaking News

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು: ಸಂಸದ ಸಾಗರ್ ಖಂಡ್ರೆ

ಬಾಲ್ಕಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಮೂಲಕ ಅವರ ಕಲಿಕೆಗೆ ಸಹಕರಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.
ಪಟ್ಟಣದಲ್ಲಿ ಪ್ರಜ್ಞಾ ಫೌಂಡೇಶನ್, ಐಐಎಫ್‌ಎಲ್ ಸಂಸ್ಥೆ ಸಹಯೋಗದಲ್ಲಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದರು.
ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಮಗುವಿನ ಹಕ್ಕು. ಟ್ಯಾಬ್ ಮೂಲಕ ಮಕ್ಕಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆಯುವಲ್ಲಿ ಐಐಎಫ್‌ಎಲ್ ಸಂಸ್ಥೆ ಮತ್ತು ಪ್ರಜ್ಞಾ ಫೌಂಡೇಶನ್ ಶಾಲಾ ಶಿಕ್ಷಣ ಇಲಾಖೆಯ ಮೂಲಕ ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡುತ್ತಿರುವುದು ಮೆಚ್ಚುವಂತಹ ಕಾರ್ಯವಾಗಿದೆ ಎಂದು ತಿಳಿಸಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ದತ್ತಾತ್ರಿ ಕಾಟ್ಕರ್, ಸಿಎಸ್‍ಆರ್ ಮ್ಯಾನೇಜರ್ ಶಂಭುಲಿಂಗ, ರಾಮಣ್ಣಗೌಡ, ಪ್ರಜ್ಞಾ ಫೌಂಡಶನ್ ಅಧ್ಯಕ್ಷ ಕಾಶಿನಾಥ ಪೂಜಾರಿ, ಇಸಿಓ ಸಹದೇವ.ಜಿ, ಮುಖ್ಯಶಿಕ್ಷಕ ರಮೇಶ ಮರೂಕರ್, ಸಂಜೀವ ಸಾವರೆ, ಹಣಮಂತ ಕಾರಾಮುಂಗೆ, ಬಿಆರ್‌ಪಿ ಸಂತೋಷ ಮುದಾಳೆ ಇದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *