Breaking News

ಪ್ರಥಮ ದರ್ಜೆ ಕಾಲೇಜು ಹೊರಗುತ್ತಿಗೆ ಸಿಬ್ಬಂದಿ ಸೊಸೈಟಿ ಸ್ಥಾಪಿಸಲು ಆಗ್ರಹ

ಕಾರವಾರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್, ಡಿ ದರ್ಜೆಯ ಸಿಬ್ಬಂದಿ ಸೊಸೈಟಿ ರಚಿಸಬೇಕು ಮತ್ತು ಹೊರಗುತ್ತಿಗೆ ಏಜೆನ್ಸಿಗಳ ಶೋಷಣೆ ತಪ್ಪಿಸಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಇಲಾಖೆ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಮತ್ತು ಗ್ರುಪ್-ಡಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.
ಹೊರಗುತ್ತಿಗೆ ಸಿಬ್ಬಂದಿ ನೇಮಿಸಿಕೊಂಡಿರುವ ಏಜೆನ್ಸಿ ಕಳೆದ ಕೆಲವು ವರ್ಷಗಳಿಂದ ಕನಿಷ್ಠ ವೇತನವನ್ನೂ ನೀಡುತ್ತಿಲ್ಲ. ನೀಡುವ ವೇತನದಲ್ಲಿ ದೊಡ್ಡ ಮೊತ್ತ ಕಡಿತ ಆಡಿಕೊಂಡು, ಅಲ್ಪ ಪ್ರಮಾಣದ ವೇತನ ಕೊಡಲಾಗುತ್ತಿದೆ’ ಎಂದು ದೂರಿದರು.
ಸಿಬ್ಬಂದಿಗೆ ಭವಿಷ್ಯ ನಿಧಿ (ಪಿ.ಎಫ್) ಪಾವತಿಸುತ್ತಿಲ್ಲ. ವೇತನದಲ್ಲಿ ಪಿ.ಎಫ್ ಮೊತ್ತ ಕಡಿತ ಮಾಡಿಕೊಳ್ಳಲಾಗುತ್ತಿದೆ. ಆದರೆ, ಪಿ.ಎಫ್ ಖಾತೆಗೆ ಯಾವುದೇ ಮೊತ್ತ ಜಮಾ ಆಗುತ್ತಿಲ್ಲ. ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಕೆಲವು ಕಾಲೇಜುಗಳಲ್ಲಿ ರಜೆಯನ್ನೂ ನೀಡಲು ನಿರಾಕರಿಸುತ್ತಿದ್ದಾರೆ’ ಎಂದೂ ದೂರಿದರು.
ಹೊರಗುತ್ತಿಗೆ ನೌಕರರ ಸೊಸೈಟಿ ರಚನೆಗೆ ರಾಜ್ಯದ 29 ಜಿಲ್ಲೆಗಳಿಂದ ಪ್ರಸ್ತಾವ ಸಲ್ಲಿಕೆಯಾಗಿದೆ. ಉತ್ತರ ಕನ್ನಡ ಸೇರಿ ಮೂರು ಜಿಲ್ಲೆಗಳಲ್ಲಿ ಈವರೆಗೆ ಪ್ರಸ್ತಾವ ಸಲ್ಲಿಸಿಲ್ಲ. ವಿಳಂಬ ಮಾಡದೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *