ಮಂಡ್ಯ: ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಇಂಧನ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿ, ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ತಲಾ 1 ಸಾವಿರ ಮೆ.ವ್ಯಾ.ವಿದ್ಯುತ್ ಖರೀದಿಗೆ ಯೋಜನೆ ರೂಪಿಸಲಾಗಿದೆ. ದೀರ್ಘಾವಧಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

