ಬೆಂಗಳೂರು: ರಾಜ್ಯ ಸರ್ಕಾರವು ‘ಸಂತ ಸೇವಾಲಾಲ್ ಪ್ರಶಸ್ತಿ’ ಸ್ಥಾಪಿಸಿ ಆದೇಶ ಹೊರಡಿಸಿದೆ.
ಈ ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಬಂಜಾರಾ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದ ಹಿರಿಯ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆ ಪ್ರಶಸ್ತಿ ಸ್ಥಾಪಿಸುವಂತೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದ ಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

