ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡಬೇಕು. ಅಲ್ಲದೆ ಅಮಿತ್ ಶಾ ಅವರು ಬಹಿರಂಗವಾಗಿ ಅಂಬೇಡ್ಕರ್ ಅವರಿಗೆ ಕ್ಷಮೆಯಾಚನೆ ಮಾಡಬೇಕು ಎಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಇನ್ನೂ ರಸ್ತೆಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕೂಡಲೇ ಎಚ್ಚೇತ್ತುಕೊಳ್ಳದಿದ್ದರೇ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
Check Also
ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ
ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …
bigtvnews | Hubli Dharwad News | Kannada News | Karnataka News Hubli News | News In Hubli | Local news

