Breaking News

ವಕೀಲ ವೃತ್ತಿಗೆ ಗೌರವ ತಂದುಕೊಟ್ಟವರು ಅಂಬೇಡ್ಕರ್: ಕಾಂಗ್ರೆಸ್ ಲೀಗಲ್ ಸೆಲ್ ನಿಂದ ರಾಷ್ಟ್ರಪತಿಗೆ ಮನವಿ

ಹುಬ್ಬಳ್ಳಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಅಮಿತ್ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಹಾಗೂ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಲೀಗಲ್ ಸೆಲ್ ವತಿಯಿಂದ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ ಧಾರವಾಡ ಅವಳಿನಗರದ ಬಂದ್ ಗೆ ಬೆಂಬಲ ಸೂಚಿಸಿದ ಅವರು, ಕೂಡಲೇ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ವಕೀಲ ವೃತ್ತಿಗೆ ಗೌರವ ತಂದುಕೊಟ್ಟಿರುವ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *