Breaking News

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆ: ₹6,310 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಇಂದು ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ.
15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇ 41 ಮೊತ್ತವನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುತ್ತದೆ.
2024ರ ಡಿಸೆಂಬರ್ ತಿಂಗಳ ಕಂತಿನಲ್ಲಿ ₹89,086 ಕೋಟಿ ಬಿಡುಗಡೆಗೊಳಿಸಿತ್ತು.
ರಾಜ್ಯಗಳಿಗೆ ಅಭಿವೃದ್ಧಿ ಹಾಗೂ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ತೊಡಗಿಸಲು ಅನುಕೂಲ ಮಾಡಲು ಈ ಕಂತು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *