Breaking News

ಆಶಾ ಕಾರ್ಯಕರ್ತೆಯರನ್ನು ಸಿಎಂ ಸಿದ್ದರಾಮಯ್ಯ ಬೀದಿಗೆ ತಂದು ನಿಲ್ಲಿಸಿದ್ದಾರೆ: ಆರ್.ಅಶೋಕ್ ಕಿಡಿ

ಬೆಂಗಳೂರು: ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡುವುದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ.
ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿರುವ 25 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೊರೆವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ ನಡೆಸುತ್ತಿದ್ದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕಿವಿ ಕೊಡದಿರುವುದು ಶ್ರಮಿಕ ವರ್ಗಗಳ ಮೇಲೆ ಈ ಸರ್ಕಾರಕ್ಕಿರುವ ಅಸಡ್ಡೆ ತನವನ್ನು ಸಾಕ್ಷೀಕರಿಸುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಅಧಿಕಾರಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತೆಯರ ಮತ ಪಡೆಯಲು ಬೆಟ್ಟದಷ್ಟು ಪೊಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಬೇಡಿಕೆ ಈಡೇರಿಸದೇ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಲೆ ಕೊಡದ ಈ ಸರ್ಕಾರಕ್ಕೆ ನಾಡಿನ ಜನ ಹಿಡಿಶಾಪ ಹಾಕುತ್ತಿದ್ದಾರೆ. ಈ ಕೂಡಲೇ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *