ಬೆಂಗಳೂರು : ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ನೋಂದಣಿ ಅವಧಿಯನ್ನು ಜನವರಿ 20ರವರೆಗೆ ಹಾಗೂ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.
ಶೇಂಗಾ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 6783 ರೂ. ನಿಗದಿಪಡಿಸಲಾಗಿದೆ. ಖರೀದಿ ಅವಧಿ ವಿಸ್ತರಣೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಜನವರಿ 22ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

