Breaking News

ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿ: ಗೌರವಧನ 10 ಸಾವಿರಕ್ಕೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ತಿಳಿಸಿದರು.
ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *