Breaking News

ಇಂದು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್: ಸಿಎಂ ಸಿದ್ದರಾಮಯ್ಯರಿಂದ ಸ್ವಾಗತ

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಶ್ರೀಮತಿ ಸುದೇಶ ಧನಕರ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ ರಾಜ್ಯಗಳ ಲೋಕಸೇವಾ ಆಯೋಗಗಳ 25ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಂತರ, ಬಿಇಎಲ್‌ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಿಹೆಚ್‌ಇಎಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಇಂದು ಸಂಜೆಯೇ ನವದೆಹಲಿಗೆ ತೆರಳಲಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *