Breaking News

ಬೆಳಗಾವಿಯಲ್ಲಿ ಎನ್ ಐ ಎಫ್ ಟಿ ಇ ಎಂ ಸ್ಥಾಪನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಿಗೆ ಸಂಸದ ಜಗದೀಶ್ ಶೆಟ್ಟರ್ ಮನವಿ

ಬೆಳಗಾವಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಭೇಟಿ ಮಾಡಿದ್ದು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆಯಂಡ್ ಮ್ಯಾನೇಜ್ ಮೆಂಟ್ ಸ್ಥಾಪನೆಗೆ ಮನವಿ ಮಾಡಿದರು.
ಇದಕ್ಕೂ ಮುನ್ನ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವರಾದ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿ, ಅವರಿಗೂ ಮನವಿ ಸಲ್ಲಿಸಿದರು.
ಈ ಪ್ರಸ್ತಾವನೆ ಅನುಮೋದನೆ, ಅಗತ್ಯ ಅನುದಾನ ಮಂಜೂರಾತಿಗಾಗಿ ಕೇಂದ್ರ ಹಣಕಾಸು ಸಚಿವರಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವಾಲಯ ಮಂಡಿಸುತ್ತಿದೆ. ಇದಕ್ಕೆ ಅನುಮೋದನೆ ನೀಡಿ, ರಾಜ್ಯದ ರೈತರಿಗೆ, ಗ್ರಾಹಕರಿಗೆ, ಕ್ಷೇತ್ರದ ಎಲ್ಲಾ ಜನತೆಗೆ ಅನುಕೂಲತೆಯನ್ನು ಕಲ್ಪಿಸಿ ಕೊಡುವಂತೆ ಮನವಿ ಮಾಡಿದರು.
ಶೆಟ್ಟರ್ ಅವರ ಮನವಿಗೆ ಸ್ಪಂದಿಸಿರುವ ನಿರ್ಮಲಾ ಅವರು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆಯಂಡ್ ಮ್ಯಾನೇಜ್ ಮೆಂಟ್ ಸ್ಥಾಪಿಸುವ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *