Breaking News

ಷೇರುಗಳ ಮಾರಾಟ ₹14 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆ: ಸೆಬಿ ಅಧ್ಯಕ್ಷೆ ಮಾಧವಿ ಪುರಿ

ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಕಂಪನಿಗಳು ಷೇರುಗಳ ಮಾರಾಟ ಹಾಗೂ ಸಾಲಪತ್ರಗಳ ಮೂಲಕ ₹14.27 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಹೇಳಿದ್ದಾರೆ.
2023-24ರಲ್ಲಿ ₹11.8 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಬಂಡವಾಳ ಸಂಗ್ರಹ ಪ್ರಮಾಣವು ಶೇ 21ರಷ್ಟು ಹೆಚ್ಚಳವಾಗುವ ಅಂದಾಜಿದೆ ಎಂದು ಹೇಳಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಈಕ್ವಿಟಿ ಮೂಲಕ ₹3.3 ಲಕ್ಷ ಕೋಟಿ ಮತ್ತು ಸಾಲಪತ್ರಗಳಿಂದ ₹7.3 ಲಕ್ಷ ಕೋಟಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
ರಿಯಲ್‌ ಎಸ್ಟೇಟ್‌, ಮೂಲಸೌಕರ್ಯ ಹೂಡಿಕೆ ಟ್ರಸ್ಟ್‌ ಮತ್ತು ಮುನಿಸಿಪಾಲ್‌ ಬಾಂಡ್‌ಗಳ ಮೂಲಕ ₹10 ಸಾವಿರ ಕೋಟಿಯಷ್ಟೇ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಈಕ್ವಿಟಿ ಮತ್ತು ಸಾಲಪತ್ರಗಳ ಮೂಲಕ ಹೆಚ್ಚಿನ ಬಂಡವಾಳ ಸಂಗ್ರಹಿಸಲಾಗುವುದು ಎಂದು ಹೇಳಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *