Breaking News

ಜಾತಿಗಣತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಾತಿ ಗಣತಿ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಸರಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು.
ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿ ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *