Breaking News

ಚನ್ನರಾಯಪಟ್ಟಣ: ಸಾರ್ವಜನಿಕ, ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ₹2.89 ಕೋಟಿ ಅನುದಾನ ಬಿಡುಗಡೆಗೆ ಮನವಿ

ಚನ್ನರಾಯಪಟ್ಟಣ: ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಸೇರಿ ತಾಲ್ಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ₹2.89 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಮನವಿ ಸಲ್ಲಿಸಿದರು.
ತಾಲ್ಲೂಕು ಕೇಂದ್ರದಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ದುರಸ್ತಿ ಮತ್ತು ನವೀಕರಣಕ್ಕೆ ₹52 ಲಕ್ಷ, ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಹಳೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದ ದುರಸ್ತಿಗೆ ₹23 ಲಕ್ಷ, ಹಿರೀಸಾವೆ ಹೋಬಳಿ ಕೇಂದ್ರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ದುರಸ್ತಿ ಮತ್ತು ನವೀಕರಣಕ್ಕೆ ₹64.65 ಲಕ್ಷ ಮತ್ತು ಶ್ರವಣಬೆಳಗೊಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಸ್ತ್ರಚಿಕಿತ್ಸಾ ಕಟ್ಟಡ ನಿರ್ಮಾಣಕ್ಕೆ ₹1.50 ಕೋಟಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಆಸ್ಪತ್ರೆಗಳ ಕೆಲವು ಕಟ್ಟಡಗಳು ಶಿಥಿಲವಾಗಿವೆ. ಅದೇರೀತಿ ಶೌಚಾಲಯಗಳ ದುರಸ್ತಿಯಾಗಬೇಕಿದೆ. ಅಸ್ಪತ್ರೆಗಳ ನವೀಕರಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿದ್ದು, ಅದಕ್ಕೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *