Breaking News

ಸಿಂಧನೂರು: ನಗರ ಯೋಜನೆ ಪ್ರಾಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರವೆಂದು ಮೇಲ್ದರ್ಜೆಗೇರಿಸಿ ಆದೇಶ

ಸಿಂಧನೂರು: ನಗರ ಯೋಜನಾ ಪ್ರಾಧಿಕಾರವನ್ನು ಸರ್ಕಾರ ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರವೆಂದು ಮೇಲ್ದರ್ಜೆಗೇರಿಸಿ ಆದೇಶ ನೀಡಿದೆ.
ಡಿಸೆಂಬರ್ 21, 2000ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 4(ಎ-1) ರಡಿಯಲ್ಲಿ ಪ್ರದತ್ತವಾದ ಅಧಿಕಾರದಿಂದ ಸಿಂಧನೂರು ಸ್ಥಳೀಯ ಯೋಜನಾ ಪ್ರದೇಶದಲ್ಲಿನ ಪಟ್ಟಣ ಮತ್ತು ಸುತ್ತಮುತ್ತಲಿನ 21 ಗ್ರಾಮಗಳಿಗೆ ಸೀಮಿತಗೊಳಿಸಿ ನಗರ ಯೋಜನಾ ಪ್ರಾಧಿಕಾರ ಎಂದು ಘೋಷಿಸಲಾಗಿತ್ತು.
ಸಿಂಧನೂರು ತಾಲ್ಲೂಕು ಕೇಂದ್ರ ಸ್ಥಾನವಾಗಿದ್ದು, ಪಟ್ಟಣದ ಯೋಜನಾಬದ್ಧ ಬೆಳವಣಿಗೆಯ ಉದ್ದೇಶದಿಂದ ಹಾಗೂ ಪಟ್ಟಣದ ವ್ಯಾಪ್ತಿಯಲ್ಲಿನ ಅಭಿವೃದ್ಧಿಗಳನ್ನು ನಿಯಂತ್ರಿಸಲು ಸಿಂಧನೂರು ಯೋಜನಾ ಪ್ರದೇಶವನ್ನು ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರವನ್ನಾಗಿ ಮೇಲ್ದರ್ಜೆಗೇರಿಸಿ ನಗರಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಪ್ರಾಧಿಕಾರದ ಅಧೀನ ಕಾರ್ಯದರ್ಶಿ ಲತಾ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಜನವರಿ 10 ರಿಂದ ಈ ಆದೇಶ ಜಾರಿಗೆ ಬಂದಿರುವುದಾಗಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *