ವಡಗೇರಾ: ತಾಲ್ಲೂಕು ಕೇಂದ್ರವಾಗಿ ಏಳು ವರ್ಷಗಳ ಬಳಿಕ ನಂತರ ವಡಗೇರಾ ಪಟ್ಟಣದಲ್ಲಿ ಮಿನಿವಿಧಾನ ಸೌಧ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಇದರಿಂದಾಗಿ ತಾಲ್ಲೂಕಿನ ಜನರ ಬಹುದಿನಗಳ ಕನಸು ನನಸಾಗುತ್ತಿದೆ.
2018ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜ್ಯದಲ್ಲಿ ಸುಮಾರು 44 ನೂತನ ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ ವಡಗೇರಾ ಸಹ ಒಂದು.
ಜಮೀನು ಮಂಜೂರು: ಇಲ್ಲಿನ ತುಮಕೂರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಇರುವ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಸ.ನಂ.581ರಲ್ಲಿ 9 ಎಕರೆ ಜಮೀನನ್ನು ಕಂದಾಯ ಇಲಾಖೆಯು 2021ರಲ್ಲಿ ಮಿನಿವಿಧಾನಸೌಧಕ್ಕೆ ಜಾಗವನ್ನು ಗುರುತಿಸಿದ್ದು, ಪಹಣಿಯಲ್ಲಿಯು ಮಿನಿ ವಿಧಾನಸೌಧ (ತಾಲ್ಲೂಕು ಸಂಕೀರ್ಣ) ನಿರ್ಮಾಣಕ್ಕೆ ಮಂಜೂರು ಎಂದು ನಮೂದಿಸಲಾಗಿದೆ.
ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಶಾಸಕ ದಿವಂಗತ ವೆಂಕಟರಡ್ಡಿ ಮುದ್ನಾಳ ಅವರು ಮಿನಿ ವಿಧಾನಸೌಧ ನಿರ್ಮಾಣಕ್ಕೆ ₹10 ಕೋಟಿ ಮಂಜೂರು ಮಾಡಿಸಿದ್ದರು. ಅಲ್ಲದೇ ಮಿನಿವಿಧಾನಸೌಧ ನಿರ್ಮಾಣಕ್ಕೆ ₹ 10 ಕೋಟಿ ಅನುದಾನ ಸಾಲುವುದಿಲ್ಲ ಹಾಗಾಗಿ ಇನ್ನೂ ₹ 10 ಕೋಟಿ ನೀಡುವಂತೆ ಬಸವರಾಜ ಬೊಮ್ಮಾಯಿ ಅವರಲ್ಲಿ ಒತ್ತಾಯಿಸಿದ್ದರು. ಅನುದಾನ ನೀಡಲು ಅಂದಿನ ಸಿಎಂ ಭರವಸೆ ಕೊಟ್ಟಿದ್ದರು. ಆದರೆ ವಿವಿಧ ಕಾರಣಗಳಿಂದ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿತು. ಬಂದ ಅನುದಾನವು ಸರ್ಕಾರಕ್ಕೆ ಮರಳಿ ಹೋಯಿತು.
ವಡಗೇರಾ ಮಿನಿವಿಧಾನಸೌಧ ನಿರ್ಮಾಣಕ್ಕಾಗಿ ಕೆಕೆಆರ್‌ಡಿಬಿನಿಂದ ₹ 15 ಕೋಟಿ ಮಂಜೂರಾಗಿದ್ದು, ₹ 8 ಕೋಟಿ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಭೂಮಿಪೂಜೆ ನೆರವೇರಲಿದೆ’ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ತಿಳಿಸಿದರು.
ವಡಗೇರಾ ತಾಲ್ಲೂಕು ಕೇಂದ್ರವಾಗಿ 7 ವರ್ಷ ಕಳೆಯುತ್ತಾ ಬಂದರೂ ಈವರೆಗೂ ಮಿನಿವಿಧಾನ ಸೌಧ ನಿರ್ಮಾಣವಾಗಿಲ್ಲ. ತಾಲ್ಲೂಕು ಕಚೇರಿಗಳು ಇಲ್ಲ. ಇದರಿಂದಾಗಿ ವಡಗೇರಾದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ಪ್ರಬಲ ಒತ್ತಾಯ ಕೇಳಿ ಬಂದಿತ್ತು.
ಚನ್ನಾರಡ್ಡಿ ಪಾಟೀಲ್ ತುನ್ನೂರ ಶಾಸಕ ಯಾದಗಿರಿ ವಡಗೇರಾದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಜಮೀನು ಮಂಜೂರು ಆಗಿದೆ. ನಿರ್ಮಾಣ ಕಾರ್ಯ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಕೆಲವೇ ದಿನಗಳಲ್ಲಿ ಟೆಂಡರ್ ಕರೆಯಲಾಗುವುದು. ಶೀಘ್ರದಲ್ಲೇ ಪಟ್ಟಣದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಆಗಲಿದೆ.ಸಿದ್ದಣ್ಣಗೌಡ ಕಾಡಂನೋರ ಬಿಜೆಪಿಯ ಹಿರಿಯ ಮುಖಂಡ ಪಟ್ಟಣದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣವಾದರೆ ಒಂದೇ ಸೂರಿನಡಿ ಎಲ್ಲಾ ಇಲಾಖೆಯ ಕಚೇರಿಗಳು ಕೆಲಸ ನಿರ್ವಹಿಸುವುದರಿಂದ ಸಾರ್ವಜನಿಕರಿಗೆ ಅಲೆದಾಟ ತಪ್ಪುತ್ತದೆ. ಕೂಡಲೆ ಟೆಂಡರ್ ಕರೆದು ಕಾಮಗಾರಿಯನ್ನು ಆರಂಭಿಸಬೇಕು.
bigtvnews | Hubli Dharwad News | Kannada News | Karnataka News Hubli News | News In Hubli | Local news

