ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

