Breaking News

ಐದು ವರ್ಷ ಸಿದ್ಧರಾಮಯ್ಯ ಅವರೇ ಸಿಎಂ: ಸಚಿವ ಎಂ.ಬಿ.ಪಾಟೀಲ್

ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ತಿ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ಪರೋಕ್ಷವಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ.
ಈ ಕುರಿತು ಸಿರಸಂಗಿ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಯಾವ ಒಪ್ಪಂದ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಪೂರ್ತಿ ಅವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು. ಡಿನ್ನರ್ ಪಾರ್ಟಿ ಮಾಡುವುದರಲ್ಲಿ ತಪ್ಪೇನಿಲ್ಲ, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.
ಸಂಕ್ರಮಣ ಹಬ್ಬದ ಬಳಿಕ ಆಪರೇಷನ್‌ ಆಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಂ ಬಿ ಪಾಟೀಲ್‌ ಅವರು, ಈಗಾಗಲೇ ಜೆಡಿಎಸ್ ಶಾಸಕರು ನಮ್ಮ‌ ಜೊತೆ ಇದ್ದಾರೆ. ಹಾಗೆ ಬಿಜೆಪಿಯ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ. ರಾಜಕೀಯ ಬೆಳವಣಿಗೆ ಏನಾದ್ರು ಆದರೆ ಅವರೆಲ್ಲರನ್ನು ಪಕ್ಷಕ್ಕೆ ಕರೆತರುತ್ತೇವೆ ಎಂದರು. ಯಾರ್ಯಾರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವುದು ನಿಮಗೂ ತಿಳಿದಿರುವ ವಿಚಾರ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *