Breaking News

2025 ರಲ್ಲಿ ಭಾರತದ ಆರ್ಥಿಕತೆಯು ದುರ್ಬಲಗೊಳ್ಳುವ ನಿರೀಕ್ಷೆ: ಐಎಂಎಫ್ ಎಚ್ಚರಿಕೆ

ನವದೆಹಲಿ: ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ 2025ರಲ್ಲಿ ಭಾರತದ ಆರ್ಥಿಕತೆಯು ದುರ್ಬಲಗೊಳ್ಳುವ ನಿರೀಕ್ಷೆಯಿದೆ ಎಂದು ಐಎಂಎಫ್‌ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಎಚ್ಚರಿಕೆ ನೀಡಿದ್ದಾರೆ.
ಮುಖ್ಯವಾಗಿ ಅಮೆರಿಕದ ವ್ಯಾಪಾರ ನೀತಿಯ ಸುತ್ತ ಈ ವರ್ಷ ಜಗತ್ತಿನಲ್ಲಿ ಸಾಕಷ್ಟು ಅನಿಶ್ಚಿತತೆಯನ್ನು ನಿರೀಕ್ಷಿಸುವುದಾಗಿ ಜಾರ್ಜೀವಾ ಹೇಳಿದರು.
ಜಾಗತಿಕ ಬೆಳವಣಿಗೆಯು 2025ರಲ್ಲಿ ಸ್ಥಿರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ, ಆದರೆ ಪ್ರಾದೇಶಿಕ ಮಟ್ಟದಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
2025ರಲ್ಲಿ ಭಾರತದ ಆರ್ಥಿಕತೆಯು ದುರ್ಬಲವಾಗಲಿದೆ ಎಂಬ ನಿರೀಕ್ಷೆ ಇದೆ ಎಂದು ಜಾರ್ಜೀವಾ ಹೇಳಿದರು. ಆದರೆ ಎಷ್ಟರಮಟ್ಟಿಗೆ ದುರ್ಬಳವಾಗಲಿದೆ ಎಂಬುದನ್ನುಅ ವರು ವಿವರಿಸಿಲ್ಲ.
ನಾವು ನಿರೀಕ್ಷಿಸಿದ್ದಕ್ಕಿಂತ ಯುಎಸ್ ಸ್ವಲ್ಪ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ, ಇಯು ಸ್ವಲ್ಪಮಟ್ಟಿಗೆ ಸ್ಥಗಿತಗೊಂಡಿದೆ, ಮತ್ತು ಭಾರತ ದುರ್ಬಲವಾಗಿದೆ ಎಂದು ಅವರು ಹೇಳಿದರು. ಬ್ರೆಜಿಲ್ ಸ್ವಲ್ಪ ಹೆಚ್ಚಿನ ಹಣದುಬ್ಬರವನ್ನು ಎದುರಿಸುತ್ತಿದೆ ಎಂದೂ ಅವರು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *