Breaking News

ಜಾತಿಗಣತಿ ಸಭೆಯನ್ನು ಮುಂದೂಡಲು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ಧಿಗಾರರ ಜತೆ ಇಂದು ಮಾತನಾಡಿದ ಅವರು, ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, ನಾನು ಯಾವುದೇ ಸಭೆ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಇಂದು ಜಾತಿ ಗಣತಿ ವಿಚಾರವಾಗಿ ಪ್ರತ್ಯೇಕವಾಗಿ ಸಭೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದರು. ಆ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದೇನೆ. ಈ ಸಭೆಯನ್ನು ಮುಂದಕ್ಕೆ ಹಾಕಿ, ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿರುವುದಾಗಿ ತಿಳಿಸಿದರು.
ಮತ್ತೆ ಕಿತ್ತಾಡಿಕೊಂಡರೆ ಆಡಳಿತಾಧಿಕಾರಿ ನೇಮಕ ಎಚ್ಚರಿಕೆ: ಒಕ್ಕಲಿಗರ ಸಂಘದ ಹೊಸ ಪದಾಧಿಕಾರಿಗಳ ತಂಡ ರಾಜಿ ಮಾಡಿಕೊಂಡು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಮತ್ತೆ ಪದಾಧಿಕಾರಿಗಳ ಮಧ್ಯೆ ಕಿತ್ತಾಟ ನಡೆದರೆ ಆಡಳಿತಾಧಿಕಾರಿ ನೇಮಿಸುವುದಾಗಿ ಎಚ್ಚರಿಕೆ ನೀಡಿದ್ದೇನೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ ಎಂದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *