Breaking News

ಕೊಪ್ಪಳ: ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸ್ಥಳ ಲಭ್ಯತೆ ಕುರಿತು ವರದಿ ನೀಡಲು ಡಿಸಿಗೆ ರಾಜ್ಯ ಸರ್ಕಾರ ಸೂಚನೆ

ಕೊಪ್ಪಳ: ಜಿಲ್ಲೆಯಲ್ಲಿ ಅಣು ವಿದ್ಯುತ್‌ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್‌ ಕಾರ್ಪೋರೇಶನ್ ಲಿಮಿಟೆಡ್ (ಎನ್ ಟಿಪಿಸಿಎಲ್) ಉದ್ದೇಶಿಸಿದ್ದು, ಈ ಕುರಿತು ಜಾಗ ಗುರುತಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಆದರೆ, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಸ್ಥಳ ಲಭ್ಯತೆ ಕುರಿತು ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗೆ ಸೂಚಿಸಿದೆ.
ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಜಗದೀಶ್ ಅವರು ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದು, ತುರ್ತು ಕ್ರಮ ವಹಿಸಿ, ವರದಿ ನೀಡುವಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿಈ ಬಗ್ಗೆ ಪತ್ರ ಬರೆದಿದ್ದಾರೆ. ಸರ್ಕಾರದ ಹಂತದಲ್ಲಿಯೇ ಜಿಲ್ಲೆಯಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸುವ ಕುರಿತು ಯಾವುದೇ ಪ್ರಸ್ತಾವ ಇಲ್ಲ ಎನ್ನುತ್ತಿದ್ದವರಿಗೆ ಈ ಪತ್ರ ಸ್ಪಷ್ಟ ಸಂದೇಶ ನೀಡುತ್ತದೆ.
ಎನ್‌ಟಿಪಿಸಿಎಲ್ ನವರು ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಅನುಷ್ಠಾನಗೊಳಿಸಲು ಉದ್ದೇಶಿಸಿ ಉದ್ದೇಶಿಸಿ ಕೊಪ್ಪಳ ಜಿಲ್ಲೆಯ ಕರಡಿಗುಡ್ಡ, ರ ರಾಯಚೂರು ಜಿಲ್ಲೆಯ ಹಲ್ಕವಟಗಿನಲ್ಲಿ ಸ್ಥಳ ಗುರುತಿಸಿದ್ದಾರೆ. ಪರಿಶೀಲಿಸಿ ವರದಿ ನೀಡುವಂತೆ ಉಲ್ಲೇಖಿತ ಪತ್ರದಲ್ಲಿ ಕೋರಲಾಗಿತ್ತು. ಆದರೆ, ಮಾಹಿತಿಯನ್ನು ಇಲ್ಲಿಯವರೆಗೂ ಕಳುಹಿಸಿಲ್ಲ. ಆದ್ದರಿಂದ ತುರ್ತಾಗಿ ಜಾಗದ ಲಭ್ಯತೆ ಒದಗಿಸುವಂತೆ ಮತ್ತೆ ನಿರ್ದೇಶನ ಮಾಡಲಾಗಿದೆ’. ಕೊಪ್ಪಳ ಜಿಲ್ಲಾಧಿಕಾರಿ 2024 ರ ಡಿ.5 ರಂದೇ ಪತ್ರ ಸ್ವೀಕಾರ ಮಾಡಿದ್ದಾರೆ.
ಹಿರೇಬೆಣಕಲ್‌ನ ಐತಿಹಾಸಿಕ ಮೋರೇರ ತಟ್ಟೆಗಳ ಬೆಟ್ಟದ ಬಳಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಿದರೆ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಎಚ್‌. ಆರ್‌ ಶ್ರೀನಾಥ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಎಚ್‌. ಆರ್‌ ಶ್ರೀನಾಥ ಅವರು, ಹಿರೇಬೆಣಕಲ್ ಗ್ರಾಮದ ಹತ್ತಿರ ಕರ್ನಾಟಕದ 7 ಅದ್ಬುತಗಳಲ್ಲಿ ಹಿರೇಬೆಣಕಲ್ ಮೋರೇರ ತಟ್ಟೆಗಳನ್ನು ಸ್ಮಾರಕಗಳೆಂದು ಗುರುತಿಸಲಾಗಿದೆ. ಅಲ್ಲದೇ ಕುಮಾರರಾಮನ ಕುಮ್ಮಟದುರ್ಗಾ, ಹೇಮಗುಡ್ಡ ಸೇರಿದಂತೆ ಐತಿಹಾಸಿಕ ಪ್ರದೇಶಗಳೂ ಇಲ್ಲಿವೆ. ಇಲ್ಲಿ ಅಣು ವಿದ್ಯುತ್ ಸ್ಥಾವರ ಘಟಕ ಸ್ಥಾಪನೆ ಮಾಡುವುದರಿಂದ ಧಕ್ಕೆ ಉಂಟಾಗುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಮೋರೇರ ತಟ್ಟೆಗಳನ್ನು ಯುನೋಸ್ಕೋ ಪಟ್ಟಿಯಲ್ಲಿ ಸೇರ್ಪಡೆಗೆ ಶಿಫಾರಸು ಆಗಿದೆ. ಇಂತಹ ಸಂದರ್ಭದಲ್ಲಿ ಅಣು ವಿದ್ಯುತ್ ಘಟಕದಿಂದ ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ. ಈ ಘಟಕ ವ್ಯಾಪ್ತಿಗೆ ಸುಮಾರು 6 ಗ್ರಾಮಗಳು ಬರುತ್ತವೆ. ಇಲ್ಲಿರುವ ಜನರಿಗೆ, ರೈತರಿಗೆ, ವೃದ್ಧರಿಗೆ, ಮಕ್ಕಳಿಗೆ ತೊಂದರೆಯಾಗುತ್ತಿದೆ. ವಿಕಿರಣದಿಂದ ಕ್ಯಾನ್ಸರ್, ಕಿಡ್ನಿ ವೈಫಲ್ಯವಾಗುವ ಸಾಧ್ಯತೆಗಳಿವೆ. ಈ ಯೋಜನೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ಆಗ್ರಹಿಸಿದ ಅವರು ಜಿಲ್ಲಾಡಳಿತ ರಾತ್ರೋರಾತ್ರಿ ಸರ್ವೇ ಮಾಡಿ ಗೌಪ್ಯವಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಖಂಡನೀಯ ಎಂದು ಅಣು ವಿದ್ಯುತ್‌ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *