ಹಗರಿಬೊಮ್ಮನಹಳ್ಳಿ: ಬಸವಣ್ಣ ನವರು ಅಂತರ್ಜಾತಿ ವಿವಾಹ ಉತ್ತೇಜಿಸಿದ್ದರು, ಆದೇ ರೀತಿ ಈಗ ನಾವೆಲ್ಲ ಅಂತಹ ವಿವಾಹ ಉತ್ತೇಜಿಸುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ ತೊಲಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹ ಹೆಚ್ಚಬೇಕು ಎಂದರು.
ಲಂಬಾಣಿ ಸಮುದಾಯ ತಾಂಡಾ ಬಿಟ್ಟು ಹೊರಬಂದಿದ್ದನ್ನು ಕೊಂಡಾಡಿದ ಅವರು, ಇಂತಹ ಮದುವೆಗಳು ಹೆಚ್ಚು ಹೆಚ್ಚು ನಡೆಯಬೇಕು, ಶ್ರೀಮಂತರು ತಮ್ಮ ಸಂಪತ್ತನ್ನು ಇಂತಹ ಕಾರ್ಯಗಳಿಗೆ ಸ್ವಲ್ಪ ಬಳಸಬೇಕು ಎಂದರು.
ನಮ್ಮ ದೇಶದಲ್ಲಿ ಶ್ರೀಮಂತರು, ಬಡವರು ಇದ್ದಾರೆ. ಶ್ರೀಮಂತರು ಅದ್ದೂರಿಯಾಗಿ ಮದುವೆ ಮಾಡ್ತಾರೆ. ಬಡವರು ಮದುವೆ ಮಾಡಿಕೊಳ್ಳಲು ಕಷ್ಟ. ಇಂತಹ ಸಾಮೂಹಿಕ ಮದುವೆಯಲ್ಲಿ ಬಡವರ ಮದುವೆ ಮಾಡುವುದು ಉತ್ತಮ ಎಂದು ಮುಖ್ಯಮಂತ್ರಿ ಹೇಳಿದರು.
ಮದುವೆ ಮಾಡಲು ಸಾಲ ಮಾಡ್ತಾರೆ. ಮನೆ ಆಸ್ತಿ ಒಡವೆ ಮಾರಾಟ ಮಾಡ್ತಾರೆ. ಪ್ರತಿಯೊಬ್ಬರು ಸರಳ ಮದುವೆ ಆಗಬೇಕು. ಪಕ್ಕದ ಮನೆಯವಳು ಓಲೆ ಹಾಕಿದ್ರೆ ಕಿವಿ ಕಿತ್ತುಕೊಳ್ಳಲು ಸಾಧ್ಯನಾ. ಬಡವರು ಬಡವರಾಗಿಯೇ ಸಾಯಬೇಕಾ? ಬಡವರು ಶ್ರೀಮಂತರು ಆಗಬಹುದು. ನಾವು ಯಾವ ಜಾತಿಯಲ್ಲಿಯೇ ಇದ್ದೀವಿ ಅದೇ ಜಾತಿಯಲ್ಲಿಯೇ ಇರಬೇಕು ಅಂತಾ ಏನಿಲ್ಲ’ ಎಂದು ಅವರು ಪ್ರತಿಪಾದಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





