Breaking News

ಛತ್ತೀಸಗಢ: ಇಂಧನ ಹಾಗೂ ಸಿಮೆಂಟ್ ಕ್ಷೇತ್ರದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಘೋಷಿಸಿದ ಗೌತಮ್ ಅದಾನಿ

ರಾಯಪುರ: ಕೈಗಾರಿಕೋದ್ಯಮಿ ಗೌತಮ್ ಅದಾನಿ ಹಾಗೂ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಭಾನುವಾರ ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದಲ್ಲಿ ಇಂಧನ ಹಾಗೂ ಸಿಮೆಂಟ್‌ ಕ್ಷೇತ್ರದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ.
ರಾಜ್ಯ ರಾಜಧಾನಿ ರಾಯಪುರದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ನಡೆಯಿತು ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇ‌ಲಾಖೆ ಹೇಳಿದೆ.
ರಾಯ್ಪುರ, ಕೊರ್ಬಾ ಹಾಗೂ ರಾಯಗಢದಲ್ಲಿರುವ ವಿದ್ಯುತ್ ಸ್ಥಾವರಗಳ ವಿಸ್ತರಣೆಗೆ ₹60 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ. ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆ 6,120 ಮೆಗಾವ್ಯಾಟ್‌ನಷ್ಟು ಹೆಚ್ಚಳವಾಗಲಿದೆ.
ಅಲ್ಲದೆ ರಾಜ್ಯದಲ್ಲಿರುವ ಸಿಮೆಂಟ್ ಕಾರ್ಖಾನೆಯ ವಿಸ್ತರಣೆಗೆ ₹5 ಸಾವಿರ ಕೋಟಿ ಹೂಡಿಕೆ ಮಾಡಲಿದೆ.
ಇದರ ಜೊತೆಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರವಾಸೋದ್ಯಮಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ ₹10 ಸಾವಿರ ಕೋಟಿ ನೀಡುವುದಾಗಿ ಅದಾನಿ ಹೇಳಿದ್ದಾಗಿ ಪ್ರಕಟಣೆ ತಿಳಿಸಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *