ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಅವರೇ ಮುಂದುವರಿಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ನಗರದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ನಮ್ಮಲ್ಲಿ ಯಾವುದೇ ಚರ್ಚೆ ಆಗುತ್ತಿಲ್ಲ.
ನಾವು ಯಾರೂ ಒಬ್ಬರಿಗೊಬ್ಬರು ಗುಂಪುಗಾರಿಕೆ ಮಾಡುತ್ತಿಲ್ಲ. ಒಟ್ಟಿಗೆ ಕುಳಿತು ಊಟ ಮಾಡುವುದು ಅಪರಾಧವೇ’ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಬದಲಾವಣೆಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಸಂಬಂಧ ಇಲ್ಲ. 21ರಂದು ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಆ ಸಂಬಂಧ ಚರ್ಚೆಗೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಕರ್ನಾಟಕಕ್ಕೆ ಬರುತ್ತಿದ್ದಾರೆ’ ಎಂದರು.
ಹೈಕಮಾಂಡ್ ನನ್ನ ಪರವಾಗಿದೆ’ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ‘ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲರ ಪರವಾಗಿಯೂ ಕಾಂಗ್ರೆಸ್ ಹೈಕಮಾಂಡ್ ನಿಂತಿದೆ. ಅದೇ ನಮ್ಮ ಬಲ’ ಎಂದರು. ಡಿ.ಕೆ. ಶಿವಕುಮಾರ್ ಹೋಮ-ಹವನಗಳ ಕುರಿತು ಮಾತನಾಡಿ ‘ ಅವರು ಧಾರ್ಮಿಕವಾಗಿ ಅಪಾರ ನಂಬಿಕೆ ಇಟ್ಟುಕೊಂಡಿರುವವರು. ಸಂವಿಧಾನದಲ್ಲಿ ಎಲ್ಲಕ್ಕೂ ಅವಕಾಶ ಇದೆ. ಎಲ್ಲರಿಗೂ ಅಧಿಕಾರ ಬೇಕೆಂಬ ಬಯಕೆ ಸಹಜ. ಯಾರೂ ಸನ್ಯಾಸಿಯಲ್ಲ’ ಎಂದರು.
ಬಜೆಟ್ ತರುವಾಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಈ ಬಗ್ಗೆ ಹೇಳಲು ಅವರೇನು ಕಾಂಗ್ರೆಸ್ ಹೈಕಮಾಂಡ ಎಂದು ಪ್ರಶ್ನಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

