ಬೆಳಗಾವಿ: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಏಪ್ರಿಲ್ ಒಳಗೆ, ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.
ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

