Breaking News

ರಾಯಚೂರು: ಭತ್ತ, ಜೋಳ ಖರೀದಿ ಕೇಂದ್ರ ತೆರೆಯದ ಕಾರಣ ಜಿಪಿಎಸ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ರೈತರು

ರಾಯಚೂರು: ಜಿಲ್ಲೆಯಲ್ಲಿ ಭತ್ತ ಹಾಗೂ ಜೋಳ ಚೆನ್ನಾಗಿ ಬೆಳೆದಿದೆ. ಸಕಾಲದಲ್ಲಿ ಕೆಲವು ಕಡೆ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ಹಾಗೂ ಜೆಪಿಎಸ್‌ ಸಮಸ್ಯೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಶೇಕಡ 60ರಷ್ಟು ರೈತರು ಭತ್ತ ಮಾರಾಟ ಮಾಡಿದ್ದಾರೆ.
ಅವರು ಮಾರಾಟ ಮಾಡಿದ ವೇಳೆಯಲ್ಲಿ ಬೆಲೆ ಕಡಿಮೆ ಇತ್ತು. ಜಿಲ್ಲೆಯಲ್ಲಿ ಭತ್ತದ ಬೆಲೆ ₹ 2300 ಇದ್ದಾಗ ತೆಲಂಗಾಣ ಸರ್ಕಾರ ಅಲ್ಲಿನ ರೈತರಿಗೆ ₹ 500 ಪ್ರೋತ್ಸಾಹಧನ ನೀಡಿ ಖರೀದಿಸಿತು. ಇಲ್ಲಿಯ ರೈತರು ಅಲ್ಲಿಗೆ ಹೋಗಿ ಮಾರಾಟ ಮಾಡಬೇಕೆಂದರೂ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಅನೇಕ ರೈತರು ಹಣಕಾಸಿನ ಸಮಸ್ಯೆಯಿಂದಾಗಿ ಆರಂಭದಲ್ಲೇ ಭತ್ತ ಮಾರಾಟ ಮಾಡಿದ್ದಾರೆ.
ಇದೀಗ ಜಿಲ್ಲೆಯಲ್ಲಿ ಭತ್ತಕ್ಕೆ ಎಂಎಸ್‌ಪಿಗಿಂತಲೂ ಹೆಚ್ಚಿನ ಬೆಲೆ ದೊರೆಯತ್ತಿದೆ. ಮುಕ್ತ ಮಾರುಕಟ್ಟೆಯಲ್ಲಿ ಗುಣಮಟ್ಟಕ್ಕೆ ಅನುಗುಣವಾಗಿ ₹ 2700ರಿಂದ ₹ 2800ರ ವರೆಗೂ ಮಾರಾಟವಾಗುತ್ತಿದೆ. ಆರಂಭದಲ್ಲಿ ದಲ್ಲಾಳಿಗಳ ಬಳಿ ಮಾರಾಟ ಮಾಡಿದವರು ನಷ್ಟ ಅನುಭವಿಸಿದ್ದಾರೆ.
ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಭತ್ತಕ್ಕೆ ಪ್ರತಿ ಕ್ವಿಂಟಲ್ ಗೆ ₹2,300 ಬೆಂಬಲ‌ ಬೆಲೆ‌ ನಿಗದಿಪಡಿಸಲಾಗಿದೆ. ಭತ್ತಕ್ಕೆ ಎಂಎಸ್‌ಪಿಗಿಂತಲೂ ಹೆಚ್ಚಿನ ಬೆಲೆ ದೊರೆಯತ್ತಿದೆ. ಹೀಗಾಗಿ ರೈತರು ಖರೀದಿ ಕೇಂದ್ರಗಳಿಗೆ ಬರುತ್ತಿಲ್ಲ ಎಂದು ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕ ಕೃಷ್ಣ ತಿಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *