ಬೆಂಗಳೂರು: ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇತ್ತೀಚೆಗೆ ಬೆಳಗಾವಿ ವಿಧಾನಸಭೆ ಅಧಿವೇಶನ ದಲ್ಲಿ ಶಾಸಕರು ‘ಗ್ಯಾರಂಟಿ ಯೋಜನೆ ಸೇರಿ ವಿವಿಧ ಕಾರಣಗಳಿಂದ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಸೋಮವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅನುದಾನ ಕೊರತೆ ಬಗ್ಗೆ ಪ್ರಸ್ತಾಪಮಾಡಿದರು. ಆಗಮಾತನಾಡಿದಸಿದ್ದರಾಮಯ್ಯ, ‘ಭಾನುವಾರವಷ್ಟೇ ಕಡತಕ್ಕೆ ಸಹಿ ಹಾಕಿದ್ದೇನೆ. ಕಾಂಗ್ರೆಸ್ ಶಾಸಕರು ಮಾತ್ರವಲ್ಲ ಎಲ್ಲಾ ಶಾಸಕರಿಗೂ ತಲಾ 10 ಕೋಟಿ ರು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು. ಮತ್ತೆ ಅಸಮಾಧಾನ: ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದಕೆಲ ಶಾಸಕರು, 10 ಕೋಟಿ ರು. ಅನುದಾನದಿಂದ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಆಗುವುದಿಲ್ಲ. ಹೆಚ್ಚುವರಿ ಅನುದಾನಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟರು. ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ, ಸದ್ಯಕ್ಕೆ 10 ಕೋಟಿ ರು. ಅನುದಾನ ಬಳಕೆ ಮಾಡಿ.ಹೆಚ್ಚುವರಿ ಅನುದಾನಬೇಕಿರುವವರು ಫೆಬ್ರವರಿ ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಿ. 2025-26ನೇ ಸಾಲಿನ ಆಯವ್ಯಯದಲ್ಲಿ ಅನುದಾನಕ್ಕೆ ಅವಕಾಶ ಮಾಡಿಕೊಡಿತುತ್ತೇನೆ ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

