Breaking News

ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗ 2027ಕ್ಕೆ ಪೂರ್ಣ: ಕೇಂದ್ರ ಸಚಿವ ವಿ.ಸೋಮಣ್ಣ

ಬಾಗಲಕೋಟೆ: ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು 2027ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊ ಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಖಜ್ಜಿಡೋಣಿ ನಿಲ್ದಾಣದ ಬಳಿ ಮಂಗಳ ವಾರ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಾರ್ಗದ ಒಟ್ಟು ಕಾಮಗಾರಿ ವೆಚ್ಚ ₹1650 ಕೋಟಿ ಆಗಲಿದ್ದು ಸದ್ಯ ಶೇ.35ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು.
ಪ್ರಸಕ್ತ ಬಜೆಟ್‌ನಲ್ಲಿ ಈ ವರ್ಷ ಈ ಕಾಮಗಾರಿಗೆ ₹140 ಕೋಟಿ ಹಣವನ್ನು ಮೀಸಲಿಡಲಿದ್ದು ಈಗಾಗಲೇ ಬಾಗಲಕೋಟೆಯಿಂದ ಖಜ್ಜಿಡೋಣಿವರೆಗೆ ಕಾಮಗಾರಿ ಪೂರ್ಣಗೊಂಡು ಮಾರ್ಚ್ ಅಂತ್ಯಕ್ಕೆ ಲೋಕಾಪೂರದವರೆಗೆ ಪೂರ್ಣಗೊಳ್ಳಲಿದೆ. ಈ ವರ್ಷ ಲೋಕಾಪೂರದಿಂದ ಯಾದವಾಡದವರೆಗೆ 23 ಕಿಮೀ ರೈಲು ಮಾರ್ಗ ನಿರ್ಮಾಣಗೊಂಡು 2025ರ ಸೆಪ್ಟೆಂಬರರ್‌ವರೆಗೆ ಮುಕ್ತಾಯಗೊಳ್ಳಲಿದೆ ಎಂದರು.
ಬಾಗಲಕೋಟೆ ಬೆಳಗಾವಿ ಸಂಪರ್ಕ ಕಲಿಸುವ ರೈಲ್ವೆ ಮಾರ್ಗ ಈವರೆಗೆ ಇರಲಿಲ್ಲ. ಬೆಳಗಾವಿ ಸಂಪರ್ಕಿಸಲು ಬಾಗಲಕೋಟೆಯಿಂದ ಗದಗ- ಹುಬ್ಬಳ್ಳಿ- ಧಾರವಾಡ ರೈಲ್ವೆ ಮಾರ್ಗವನ್ನು ಅವಲಂಬಿಸಬೇಕಿತ್ತು. ನಿಗದಿತ ಸಮಯದಲ್ಲಿ ಬಾಗಲಕೋಟೆ ಕುಡಚಿ ಮಾರ್ಗ ಪೂರ್ಣಗೊಂಡರೆ ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರವನ್ನು ವಿಸ್ತರಿಸಬಹುದಾಗಿದೆ ಎಂದು ತಿಳಿಸಿದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *