Breaking News

ಕೊಪ್ಪಳ ಗವಿಮಠ ಜಾತ್ರಾ ಮಹೋತ್ಸವ: ದಾಸೋಹಕ್ಕೆ 210 ಕ್ವಿಂಟಲ್ ಅಕ್ಕಿ ದೇಣಿಗೆ

ಕಾರಟಗಿ: ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ದಾಸೋಹಕ್ಕೆ ಭತ್ತದ ಕಣಜ ಕಾರಟಗಿಯಿಂದ 210 ಕ್ವಿಂಟಲ್ ಅಕ್ಕಿಯನ್ನು ಕಳುಹಿಸಿಕೊಡಲಾಯಿತು. ಈ ವರ್ಷವೂ ಪಟ್ಟಣದ ಅಕ್ಕಿಗಿರಣಿ ಮಾಲೀಕರು, ದಲಾಲಿ ವರ್ತಕರು, ವಿವಿಧ ದಾನಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರು, ಭಕ್ತರಿಂದ ಸಂಗ್ರಹಿಸಿದ 210 ಕ್ವಿಂಟಲ್ ಅಕ್ಕಿ ಚೀಲಗಳನ್ನು ತುಂಬಿದ ಲಾರಿಗೆ ಪೂಜೆ ಬೀಳ್ಕೊಡಲಾಯಿತು.
ಇಲ್ಲಿನ ವಿಶೇಷ ಎಪಿಎಂಸಿ ಆವರಣದಿಂದ ಲಾರಿಗೆ ಪೂಜೆ ಸಲ್ಲಿಸಿ ಅಕ್ಕಿ ಚೀಲಗಳನ್ನು ತುಂಬಿ ವಿದ್ಯುಕ್ತವಾಗಿ ಕಳುಹಿಸಿಕೊಡಲಾಯಿತು.
ಈ ವೇಳೆ ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ಎನ್. ಶ್ರೀನಿವಾಸ್ ಮಾತನಾಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯುವ ಗವಿಮಠದ ಜಾತ್ರಾ ಮಹೋತ್ಸವ ಜಗತ್ ಪ್ರಸಿದ್ಧವಾಗಿದೆ. ತಿಂಗಳು ಪರ್ಯಂತ ನಡೆಯುವ ಈ ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಏರ್ಪಡಿಸಲಾಗುವ ಮಹಾದಾಸೋಹಕ್ಕೆ ಭತ್ತದ ಕಣಜದ ಕಾರಟಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಂದ ಸಂಗ್ರಹಿಸಲಾದ 210 ಕ್ವಿಂಟಲ್ ಅಕ್ಕಿಯನ್ನು ಕಳುಹಿಸಿಕೊಡಲಾಗುತ್ತಿದೆ ಎಂದರು.
ನಮ್ಮ ನಾಡಿನ ಆರಾಧ್ಯ ದೈವಗಳಲ್ಲಿ ಒಂದಾಗಿರುವ ಶ್ರೀ ಗವಿಸಿದ್ದೇಶ್ವರ ಮಹಾಮಹಿಮರು ಈ ನಾಡಿನಲ್ಲಿ ಸಮೃದ್ದ ಮಳೆ-ಬೆಳೆಯಾಗುವಂತೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಉದ್ಯಮಿ ಕೆ. ಯಂಕಾರೆಡ್ಡೆಪ್ಪ ಚನ್ನಳ್ಳಿ, ಜಿಪಂ ಮಾಜಿ ಅಧ್ಯಕ್ಷ ಅಮರೇಶ ಕುಳಗಿ ಮಾತನಾಡಿ ಲಕ್ಷಾಂತರ ಜನತೆ ಸೇರುವ ಗವಿಮಠದ ಜಾತ್ರೆ ಈ ಬಾರಿ ಅತ್ಯಂತ ವೈಭವದಿಂದ ನಡೆಯುತ್ತಿದೆ. ಅಜ್ಜನ ಸನ್ನಿಧಿಯಲ್ಲಿ ನಡೆಯುವ ಮಹಾದಾಸೋಹಕ್ಕೆ ನೆರವಾಗಲಿ ಎಂದು ಈ ವರ್ಷವೂ ಅಕ್ಕಿ ರವಾನಿಸುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಾಣಿಜ್ಯೋದ್ಯಮಿಗಳಾದ ಸಣ್ಣ ವೀರೇಶಪ್ಪ ಚಿನಿವಾಲ, ಬಾಲಾಜಿ ಶ್ರೇಷ್ಠ, ಸತ್ಯನಾರಾಯಣ ಶ್ರೇಷ್ಟಿ, ದಲಾಲಿ ವರ್ತಕರ ಸಂಘದ ಅಧ್ಯಕ್ಷ ಬಸವರಾಜ ಪಗಡದಿನ್ನಿ, ಶಿವಶರಣೇಗೌಡ ಯರಡೋಣಾ, ದೇವರಾಜ್ ರಾಮತ್ನಾಳ, ಯಂಕಪ್ಪ ಹತ್ತಿಕಾಳ, ಕಲ್ಯಾಣಪ್ಪ ಹಿರೇಗೌಡರ್, ರಮೇಶ ಮಾವಿನಮಡಗು, ಶರಣಪ್ಪ ಕಟಾಂಬ್ಲಿ, ಮಲ್ಲಪ್ಪ ಮೇಟಿ, ಪ್ರಭು ಉಪನಾಳ, ಶರಣಪ್ಪ ಗುಂಜಳ್ಳಿ, ಬಸವರಾಜ ಚಿನಿವಾಲ, ಪ್ರವೀಣ ಗದ್ದಿ, ಮಲ್ಲಪ್ಪ ಬೆಣಕಲ್, ಮಾರ್ಕಂಡೇಯ, ಮಹಾಬಳೇಶ್ವರ ಹುರಕಡ್ಡಿ, ಬಸವರಾಜ ಜುಟ್ಟದ್, ಮಲ್ಲಪ್ಪ ಬೆನಕನಾಳ ಇದ್ದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *