Breaking News

ಕೆಪಿಎಸ್‌ಸಿ ಗ್ರೂಪ್ ಬಿ ಹುದ್ದೆಗಳ ನೇಮಕಾತಿ: ಜ.19 ಮತ್ತು 25 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಯಲಿದೆ.
ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ.
ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್‌ಚೇರ್ ಒದಗಿಸಲಾಗುವುದು.
ಪರೀಕ್ಷಾ ದಿನದಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಿ ಆದೇಶಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಲು ಸಿದ್ಧತೆ ಮಾಡಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *