Breaking News

ಹುಬ್ಬಳ್ಳಿ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ 45 ರೌಡಿಶೀಟರಗಳ ಗಡಿಪಾರು; ಕಮಿಷನರ್ ಎನ್.ಶಶಿಕುಮಾರ್ ಆದೇಶ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಲು ಹುಬ್ಬಳ್ಳಿ ಧಾರವಾಡ ಅವಳಿನಗರದ ಪೊಲೀಸ ಕಮಿಷನರೇಟ್ ವ್ಯಾಪ್ತಿಯ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು.

ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ‌ಧಾರವಾಡ ಅವಳಿನಗರದಲ್ಲಿ‌ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈಗಾಗಲೇ ಕಟ್ಟುನಿಟ್ಟನ ಕ್ರಮಗಳನ್ನು‌ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ. ಈಗ‌ ಅದರ ಮುಂದುವರೆದ ಭಾಗವಾಗಿ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದವರನ್ನು ಗುರುತಿಸಿ 45 ಜನ ರೌಡಿಶೀಟಗಳನ್ನು, ಬೀದರ್, ಯಾದಗಿರಿ, ತುಮಕೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ಧಾರವಾಡ ಶಹರ ಪೊಲೀಸ್ ಠಾಣೆಯ 7ಜನ, ಉಪನಗರ ಪೊಲೀಸ್ ಠಾಣೆಯ 3 ಜನ, ವಿದ್ಯಾಗಿರಿ ಠಾಣೆಯ 7ಜನ, ಮೂವರು ಪೊಲೀಸ್ ಠಾಣೆಯ ವ್ಯಾಪ್ತಿಯ ಒಟ್ಟು 17 ಜನ ಗಡಿಪಾರು ಮಾಡಲಾಗಿದೆ. ಹುಬ್ಬಳ್ಳಿ ನಗರದ ಶಹರ ಠಾಣೆಯ 1, ಉಪನಗರ ಠಾಣೆಯ 1 ಒಬ್ಬ, ಕಮಿರಿಪೇಟ್ ಠಾಣೆಯ 2 ಜನ, ಬೆಂಡಿಗೇರಿ ಠಾಣೆಯ 3ಜನ, ಕಸಬಾ ಪೇಟ್ ಠಾಣೆಯ 9 ಜನ, ಅಶೋಕ ನಗರ ಠಾಣೆ 2 ಜನ, ವಿದ್ಯಾನಗರ ಠಾಣೆಯ 1 ಜನ, ಎಪಿಎಂಸಿ ನವನಗರ ಠಾಣೆಯ 4 ಜನ, ಜತೆಗೆ ಕೇಶ್ವಾಪುರ ಠಾಣೆಯ 5 ಜನ ಸೇರಿ ಹುಬ್ಬಳ್ಳಿಯ ವ್ಯಾಪ್ತಿಯಲ್ಲಿ ಒಟ್ಟು 28 ಜನ ರೌಡಿಶೀಟರಗಳನ್ನು ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಗಡಿಪಾರು ಆದೇಶ ಉಲ್ಲಂಘಿಸಿದ್ದಲ್ಲಿ ಈ ರೌಡಿಶೀರಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ರವಾನಿಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *