Breaking News

ನಾಳೆ(ಜ.17) ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಪ್ರವಾಸ

ಬಳ್ಳಾರಿ : ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಜನವರಿ 17 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.17 ರಂದು ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್ ಏರ್ಪೋರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಮಧ್ಯಾಹ್ನ 03.10 ಗಂಟೆಗೆ ಬಳ್ಳಾರಿಯ ಜಿಂದಾಲ್ ಏರ್ಪೋಟ್ಗೆ ಆಗಮಿಸುವರು.
ಅಲ್ಲಿಂದ 03.15 ಕ್ಕೆ ಹೊರಟು ಸಂಜೆ 04 ಗಂಟೆಗೆ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದ ಬಳಿಯ ಎಸ್ಬಿ ಸಂಸ್ಥೆಯ ಬೃಂದಾ ನ್ಯಾಷನಲ್ ಪಬ್ಲಿಕ್ ಶಾಲೆ, ಬೃಂದಾ ಪಿಯು ಕಾಲೇಜ್, ಬೃಂದಾ ಡಿಗ್ರಿ ಕಾಲೇಜ್ ಮತ್ತು ಸ್ಕಂದ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜ್ಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಸಂಜೆ 05 ಗಂಟೆಗೆ ಹೊರಟು, ಜಿಂದಾಲ್ ಏರ್ಪೋರ್ಟ್ ನಿಂದ ವಿಶೇಷ ವಿಮಾನದ ಮೂಲಕ ಇಂದೋರ್ಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *