ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿರುವ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ, ಫೆ.19ಕ್ಕೆ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ‘ವೈಜ್ಞಾನಿಕ ದತ್ತಾಂಶ ಹೊಂದಿರುವ ಆಯೋಗದ ವರದಿಯನ್ನು ಸರ್ಕಾರವು ಅಪ್ರಸ್ತುತಗೊಳಿಸದೆ, ಸಚಿವ ಸಂಪುಟ ಅಥವಾ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯಬಾರದು’ ಎಂದು ಆಗ್ರಹಿಸಿದರು. ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಇದೇ 29ರಂದು ರಾಜ್ಯದ ಎಲ್ಲ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

