Breaking News

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ 413 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಬೆಂಗಳೂರು ಮತ್ತು ಪಿಸಿಸಿ, ಕಲಬುರ್ಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಸಂಸ್ಥೆಯು ಗ್ರೂಪ್ ‘ಎ’, ‘ಬಿ’, ಮತ್ತು ‘ಸಿ’ ವೃಂದದಲ್ಲಿ ಖಾಲಿ ಇರುವ 587 ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಆಡಳಿತಾತ್ಮಕ ಅನುಮೋದನೆ ಕೋರಿತ್ತು.
ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಮೊದಲ ಹಂತದಲ್ಲಿ ಭರ್ತಿ ಮಾಡಿಕೊಳ್ಳಲು ಪ್ರಸ್ತಾಪಿಸಿರುವ 425 ಹುದ್ದೆಗಳ ಪೈಕಿ 413 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಎಲೆಕ್ಟ್ರಿಷಿಯನ್ ಮತ್ತು ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ತಲಾ ಒಬ್ಬರಂತೆ, ಎರಡು ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಆದರೆ, ಇದಕ್ಕೆ ಕೆಲ ಸಲಹೆ ನೀಡಿಕೆಯೊಂದಿಗೆ ಷರತ್ತುಗಳನ್ನು ವಿಧಿಸಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *