Breaking News

ಮನೆಗಳ್ಳನ ಬಂಧನ: 6,45,000 ರೂ‌. ಮೌಲ್ಯದ ಆಭರಣ ವಶ

ಧಾರವಾಡ: ಇತ್ತೀಚಿಗೆ ಧಾರವಾಡದ ರಾಹುಲ್ ಗಾಂಧಿ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಮೂಲದ ಸುನೀಲ ಮುಳಗುಂದ ಎಂಬಾತನನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 6,09,000 ರೂ. ಮೌಲ್ಯದ 87 ಗ್ರಾಂ ಬಂಗಾರದ ಆಭರಣಗಳು ಮತ್ತು 36,000 ರೂ. ಮೌಲ್ಯದ 507 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 6,45,500 ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಧಾರವಾಡ ಉಪ ವಿಭಾಗದ ಎಸಿಪಿ ರವರಾದ ಶ್ರೀ ಪ್ರಶಾಂತ ಸಿದ್ದಣಗೌಡರವರ ನೇತ್ರತ್ವದಲ್ಲಿ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ಎನ್.ಸಿ.ಕಾಡದೇವರ ರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಇನ್ನೂ 2 ಪ್ರಕಣಗಳು ಪತ್ತೆಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮತ್ತೋರ್ವ ಆರೋಪಿತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟ‌ರ್ ಮತ್ತವರ ಸಿಬ್ಬಂದಿ ತಂಡದ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *