ವಿಜಯವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಆಂಧ್ರಪ್ರದೇಶಕ್ಕೆ ಆಗಮಿಸಿದರು.
ಅವರು ಇಂದು ವಿಜಯವಾಡದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಅವರು ಎನ್‌ಡಿಆರ್‌ಎಫ್‌ನ 20 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಹೈದರಾಬಾದ್‌ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಫ್ರೊಬೆಷನರಿ ಐಪಿಎಸ್ ಅಧಿಕಾರಿಗಳಿಗೆ ಶೂಟಿಂಗ್ ಕೌಶಲದ ತರಬೇತಿಗಾಗಿ ನಿರ್ಮಿಸಲಾಗುತ್ತಿರುವ ಇಂಟಿಗ್ರೇಟೆಡ್ ಇಂಡೋರ್ ಶೂಟಿಂಗ್ ರೇಂಜ್‌ಗೆ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ತಮ್ಮ ಭೇಟಿಯ ವೇಳೆ ಅವರು, ತಿರುಪತಿಯಲ್ಲಿ ರಾಜ್ಯ ಸರ್ಕಾರದ ಪ್ರಾದೇಶಿಕ ವಿಧಿ ವಿಜ್ಞಾನಗಳ ಪ್ರಯೋಗಾಲಯದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

