Breaking News

ಮುಡಾ ಹಗರಣ: ಸಿಎಂ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿದ ಬೆನ್ನಲ್ಲೇ ಸಿದ್ಧರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಭವಿಷ್ಯದಲ್ಲಿ ಭಾರೀ ಕಾನೂನು ಸಂಕಷ್ಟ ತಂದೊಡ್ಡಲಾಗುತ್ತದೆ ಎಂದು ಹೇಳಲಾಗುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ) 300 ಕೋಟಿ ರೂ.ಆಸ್ತಿ ಜಪ್ತಿ ಮಾಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ.
ಇಡಿ ಮುಡಾಗೆ ಸೇರಿದ ಸುಮಾರು 300 ಕೋಟಿ ಮೌಲ್ಯದ 142 ಚಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಇದರಲ್ಲಿ ಅಕ್ರಮ ವಹಿವಾಟು, ಬೇನಾಮಿ ಆಸ್ತಿ ಸಂಪಾದನೆ, ಬೇರೆಯವರ ಹೆಸರಿನಲ್ಲಿ ಆಸ್ತಿ ಖರೀದಿ ಸೇರಿ ಮುಡಾದ ಕರ್ಮಕಾಂಡವನ್ನೇ ಬಿಚ್ಚಿಟ್ಟಿತ್ತು.
ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರುಗಳು ಸಿಎಂ ಸಿದ್ದರಾಮಯ್ಯನವರ ತಲೆದಂಡಕ್ಕೆ ಪಟ್ಟು ಹಿಡಿದಿದ್ದಾರೆ. ಈ ಕುರಿತು ಪ್ರತ್ಯೇಕವಾಗಿ ಇಬ್ಬರು ಎಕ್ಸ್ ನಲ್ಲಿ ಪೊಸ್ಟ್ ಮಾಡಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮೂಡಾ ಹಗರಣದಲ್ಲಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ 300 ಕೋಟಿ ಆಸ್ತಿ ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಸಾಂವಿಧಾನಿಕ ಹುದ್ದೆಯಲ್ಲಿರುವ ಘನತೆವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ಸಿಗರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಉಚ್ಚ ನ್ಯಾಯಾಲಯದ ತೀರ್ಪು ಮುಖಭಂಗ ಉಂಟುಮಾಡಿತು, ದೇಶದ ಹೆಸರಾಂತ ಕಾನೂನು ಪಂಡಿತ ಹಿರಿಯ ವಕೀಲರುಗಳೇ ದೆಹಲಿಯಿಂದ ಬಂದು ಸಿದ್ದರಾಮಯ್ಯನವರ ಪರವಾಗಿ ಸುದೀರ್ಘವಾದ ಮಂಡಿಸಿದರೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಪ್ರಭಾವ ಇರುವ ಆರೋಪವನ್ನು ತಳ್ಳಿ ಹಾಕಲು ಸಾಧ್ಯವಿಲ್ಲ , ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಕ್ರಮಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ನೀಡಿತು ಎಂದು ವಿವರಿಸಿದ್ದಾರೆ.
ಮುಖ್ಯಮಂತ್ರಿ ಕುಟುಂಬ ಪಡೆದುಕೊಂಡ 14 ನಿವೇಶನಗಳಲ್ಲಿ 56 ಕೋಟಿ ರೂ.ಗಳಷ್ಟು ಪ್ರಾಧಿಕಾರಕ್ಕೆ ನಷ್ಟವಾಗಿದೆ ಎಂದು ಉಚ್ಛ ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿತು, ಇದರ ಬೆನ್ನು ಹತ್ತಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಮುಡಾದಲ್ಲಿ ನಡೆದಿರುವ ನಿವೇಶನಗಳ ಲೂಟಿ, ಸಾವಿರಾರು ಕೋಟಿ ರೂಪಾಯಿಗಳ ನಷ್ಟ, ಹಾಗೂ ಅಕ್ರಮ ಹಣ ವರ್ಗಾವಣೆ ಹಗರಣದ ಕುರಿತ ತನಿಖೆಯಲ್ಲಿ ಮುಖ್ಯಮಂತ್ರಿಗಳ ಹಸ್ತಕ್ಷೇಪವಿರುವ ಆರೋಪದಲ್ಲೂ ಸತ್ಯಾಂಶವಿದೆ ಎಂಬ ಅಂಶಗಳನ್ನು ವಿವರಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಕುಟುಂಬ ಪಡೆದುಕೊಂಡ 14 ನಿವೇಶನಗಳಲ್ಲಿ 56 ಕೋಟಿ ರೂ.ಗಳಷ್ಟು ಪ್ರಾಧಿಕಾರಕ್ಕೆ ನಷ್ಟವಾಗಿದೆ ಎಂದು ಉಚ್ಛ ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿತು, ಇದರ ಬೆನ್ನು ಹತ್ತಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಮುಡಾದಲ್ಲಿ ನಡೆದಿರುವ ನಿವೇಶನಗಳ ಲೂಟಿ, ಸಾವಿರಾರು ಕೋಟಿ ರೂಪಾಯಿಗಳ ನಷ್ಟ, ಹಾಗೂ ಅಕ್ರಮ ಹಣ ವರ್ಗಾವಣೆ ಹಗರಣದ ಕುರಿತ ತನಿಖೆಯಲ್ಲಿ ಮುಖ್ಯಮಂತ್ರಿಗಳ ಹಸ್ತಕ್ಷೇಪವಿರುವ ಆರೋಪದಲ್ಲೂ ಸತ್ಯಾಂಶವಿದೆ ಎಂಬ ಅಂಶಗಳನ್ನು ವಿವರಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಸದ್ಯ ಸುಮಾರು 300 ಕೋಟಿ ರೂ.ಮಾರುಕಟ್ಟೆ ಮೌಲ್ಯದ 142 ಸ್ಥಿರಾಸ್ತಿಗಳನ್ನು ಕಾಯ್ದೆಯನುಸಾರ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಇಡಿ ಘೋಷಿಸಿದೆ, ಹಗರಣದ ಆಳ ದೊಡ್ಡದಾಗಿರುವ ಹಿನ್ನಲೆಯಲ್ಲಿ ತನಿಖೆ ಮುಂದುವರೆದಿರುವುದಾಗಿ ಅದು ಹೇಳಿದೆ.
ತಮ ವಿರುದ್ಧ ಹೈಕೋರ್ಟ್ ತೀರ್ಪು ಹೊರಬಂದಾಗಲೇ ಕರ್ನಾಟಕದ ಘನತೆಯನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಸ್ಥಾನದ ಗೌರವ ಉಳಿಸಲು ಸಿದ್ದರಾಮಯ್ಯನವರು ತಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕಾಗಿತ್ತು, ಆದರೆ ನೈತಿಕತೆ ಎಂಬುದು ತಮಗೆ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವ ನೀವು ಭಂಡತನದ ಪರಮಾವಧಿ ಮೆರೆದು ಸಿಎಂ ಸ್ಥಾನದಲ್ಲಿ ಮುಂದುವರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತದದಲ್ಲಿ ತಾವೇ ನಿಯುಕ್ತಿಗೊಳಿಸಿಕೊಂಡ ತಮ ಕೈಕೆಳಗಿನ ಅಧಿಕಾರಿಗಳ ಮೂಲಕ ತನಿಖೆ ನಡೆಸಿ ಕ್ಲೀನ್ ಚಿಟ್ ಪಡೆವ ಹವಣಿಕೆಯಲ್ಲಿದ್ದ ಸಿದ್ದರಾಮಯ್ಯ ನವರಿಗೆ ಜಾರಿನಿರ್ದೇಶನಾಲಯ ಬಿಡುಗಡೆ ಮಾಡಿರುವ ತನಿಖಾ ವರದಿಯ ಪ್ರಕಟಣೆ ಅವರ ಕಳಂಕಿತ ವ್ಯಕ್ತಿತ್ವವನ್ನು ಮತ್ತೊಮೆ ಅನಾವರಣಗೊಳಿಸಿದೆ, ಅನುಮಾನಿತ ಲೋಕಾಯುಕ್ತ ತನಿಖೆಗೆ ಅಂಕುಶ ಹಾಕುವ ರೀತಿಯಲ್ಲಿ ಇಡಿ ಮುಡಾ ನಿವೇಶನಗಳ ಲೂಟಿಕೋರತನದ ಭ್ರಷ್ಟತೆಯ ಕರ್ಮಕಾಂಡವನ್ನು ಇದೀಗ ಜನತೆಯ ಮುಂದಿಟ್ಟಿದೆ.
ಉಚ್ಚ ನ್ಯಾಯಾಲಯದಲ್ಲಿ ಸಿಬಿಐ ಕೋರಿಕೆಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಿರ್ಣಾಯಕ ಹಂತ ತಲುಪಿರುವ ಈ ಸಮಯದಲ್ಲೇ ಇಡಿ ಹಗರಣದ ಹೂರಣ ಬಯಲು ಮಾಡಿದೆ, ಸದ್ಯ ಈಗಾಗಲೇ 14 ಅಕ್ರಮ ನಿವೇಶನಗಳನ್ನು ಮುಡಾಗೆ ಬೇಷರತ್ ಹಿಂದಿರುಗಿಸಿರುವ ಸಿದ್ದರಾಮಯ್ಯನವರು ಆ ಮೂಲಕ ತಮ ಸ್ವಜನಪಕ್ಷಪಾತ ಹಾಗೂ ಭ್ರಷ್ಟತೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಇಡಿ ವಿವರಿಸಿದೆ.
ರಾಜ್ಯದ ಅತ್ಯುನ್ನತ ಸ್ಥಾನದಲ್ಲಿ ಕುಳಿತ ವ್ಯಕ್ತಿಯೊಬ್ಬರ ಭ್ರಷ್ಟತೆ ಹಾಗೂ ಅಕ್ರಮದ ಸಾಕ್ಷಾಧಾರಗಳು ಇಷ್ಟರ ಮಟ್ಟಿಗೆ ಸಾಬೀತಾಗಿರುವ ಹಗರಣ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದೇ ಪ್ರಥಮದ್ದಾಗಿದೆ, ಇಷ್ಟಾದರೂ ಇನ್ನೂ ಆ ಸ್ಥಾನದಲ್ಲಿ ಮುಂದುವರೆಯುತ್ತಿರುವುದು ಕರ್ನಾಟಕದ ಘನತೆ ಮಣ್ಣುಪಾಲಾದರೂ ಸರಿ ತಾನು ಮಾತ್ರ ಮುಖ್ಯಮಂತ್ರಿಯ ಅವಧಿ ಪೂರ್ಣಗೊಳಿಸಬೇಕೆಂಬ ಕರಾಳ ಸಂಕಲ್ಪ ತೊಟ್ಟಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸ್ವಾತಂತ್ರ್ಯಾನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ವ್ಯಕ್ತಿಯೊಬ್ಬರು ಈ ಪರಿಯ ಆರೋಪ ಹೊತ್ತು ಆಡಳಿತ ನಡೆಸುತ್ತಿರುವ ದಾಖಲೆ ಸಿದ್ದರಾಮಯ್ಯನವರ ಹೆಸರಲ್ಲಿ ಭವಿಷ್ಯದಲ್ಲಿ ಶಾಶ್ವತವಾಗಿ ಉಳಿಯಲಿದೆ.
ಮುಡಾ ವ್ಯೂಹದಿಂದ ಹೊರಬರಲು ಪ್ರಾರಂಭಿಕ ಹಂತದಲ್ಲಿ ನಿಮಗೆ ಮುಕ್ತ ಅವಕಾಶವಿತ್ತು, ಆದರೆ ಅದನ್ನು ಬದಿಗೊತ್ತಿ ವಿತಂಡವಾದ ಮೆರೆದಿರಿ, ಈಗಲೂ ಕನಿಷ್ಠ ನೈತಿಕತೆಯನ್ನು ಉಳಿಸಿಕೊಳ್ಳಲು ಕೊನೆ ಅವಕಾಶ ನಿಮಗಿದೆ, ನೀವು ರಾಜೀನಾಮೆ ನೀಡಿ ಕರ್ನಾಟಕದ ಗೌರವವನ್ನು ಕನಿಷ್ಠವಾದರೂ ಉಳಿಸುವ ಕೊನೆ ಅವಕಾಶ ಕಳೆದುಕೊಳ್ಳಬೇಡಿ, ಇದು ರಾಜಕೀಯ ದ್ವೇಷವಿಲ್ಲದ ನನ್ನ ಕಾಳಜಿಯ ಸಲಹೆ. ಸ್ವೀಕರಿಸುವುದು ಅಥವಾ ಧಿಕ್ಕರಿಸುವುದು ನಿಮಗೇ ಬಿಟ್ಟಿದ್ದು ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *