ರಾಯಚೂರು: ನಗರದಲ್ಲಿ ಹಿಂದುಳಿದ ವರ್ಗದ ಮಹಾನ್ ನಾಯಕರು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಪುತ್ಥಳಿ ಹಾಗೂ ಹಿಂದುಳಿದ ವರ್ಗಕ್ಕೆ ಸಮುದಾಯ ಭವನ ನಿರ್ಮಾಣ ಕುರಿತು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ಸಚಿವರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರ ಸಭೆಯಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.
ತಮ್ಮ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ಸಕಾರ ಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳು ಸಂಘಟಿತವಾಗಿ ಒಗ್ಗಟ್ಟಿನಿಂದ ಕೇಳಿದಾಗ ಹಿಂದುಳಿದ ವರ್ಗದ ಎಲ್ಲಾ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ. ಹಿಂದುಳಿದ ವರ್ಗಗಳ ಶಿಕ್ಷಣ ವಸತಿ ಸೇರಿದಂತೆ ಸಮುದಾಯಗಳಿಗೆ ಪ್ರತ್ಯೇಕ ಭವನಗಳ ಮೂಲಕ ಸರ್ವಾಂಗಣ ಅಭಿವೃದ್ಧಿಗಾಗಿ ಪ್ರಯತ್ನಿಸಲಾಗುವುದು ಎಂದರು.
ವಿವಿಧ ಸಮುದಾಯಗಳ ಮುಖಂಡರು ಪುತ್ತಳಿ ಹಾಗೂ ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ ಶೈಕ್ಷಣಿಕ ಬಲವರ್ಧನೆಗಾಗಿ ಹೆಚ್ಚುವರಿ ಕೊಠಡಿ, ಶಾಲೆ, ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ನಿರ್ಮಾಣಕ್ಕಾಗಿ ನಿವೇಶನ ಹಾಗೂ ಅನುದಾನವನ್ನು ಕೇಳಿದ್ದೀರಿ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಗರದಲ್ಲಿ ಅವಕಾಶವಿರುವ ಸ್ಥಳದಲ್ಲಿ ಸಮುದಾಯ ಭವನ ಹಾಗೂ ವಸತಿ ನಿಲಯಗಳಿಗೆ ನಿವೇಶವನ್ನು ಕೊಡಿಸಲು ಮಾತನಾಡಲಾಗುವುದು ಎಂದರು.
ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷರಾದ ಕೆ ಶಾಂತಪ್ಪ ಮಾತನಾಡಿ, ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಎಲ್ಲಾ ಸಮುದಾಯಗಳೊಂದಿಗೆ ನಾವಿದ್ದೇವೆ. ಎಲ್ಲಾ ಸಮುದಾಯಗಳ ಮುಖಂಡರು ವಿವಿಧ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದಿದ್ದೀರಿ. ಈ ಬೇಡಿಕೆಗಳನ್ನು ಈಡೇರಿಸಲು ಸಚಿವರು ಪ್ರಾಮಾಣಿಕವಾಗಿ ಪ್ರಯತ್ನಿಸಿ ಹಿಂದುಳಿದ ವರ್ಗದ ಸರ್ವಾಂಗಿಣ ಅಭಿವೃದ್ಧಿಗಾಗಿ ಶಕ್ತಿ ನೀಡಬೇಕೆಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

