Breaking News

ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ: ಶಾಶ್ವತ ಪರಿಹಾರ ಕಂಡುಕೊಳ್ಳಲು ಸಿಎಂಗೆ ಆರ್.ಅಶೋಕ್ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಬಗ್ಗೆ ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್​. ಅಶೋಕ, ರಾಜ್ಯಾದ್ಯಂತ ಸಾವಿರಾರು ಬಡ ಕುಟುಂಬಗಳು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಮನೆ-ಮಠ ತೊರೆದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿ ಆಗುತ್ತಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಬಾರದೆ, ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್​ಬಿಐ ನಿಯಮ ಮೀರಿ ಸಾಲಗಳಿಗೆ ವಾರ್ಷಿಕ ಶೇ.25ರಷ್ಟು ಬಡ್ಡಿ ವಿಧಿಸುತ್ತಿದ್ದು, ಸಾಲ ಪಡೆದವರನ್ನು ಹೆದರಿಸಿ, ಬೆದರಿಸಿ, ಕಿರುಕುಳ ಕೊಟ್ಟು ಅವರು ಆತ್ಮಹತ್ಯೆಗೆ ಶರಣಾಗುವಂತೆ ಅಥವಾ ಊರು ಮನೆ ಬಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿವೆ. ಇತ್ತೀಚಿನ ದಿನಗಳಲ್ಲಿ ಅನೇಕ ಕುಟುಂಬಗಳ ಮನೆ ಜಪ್ತಿ ಮಾಡುವ ಘಟನೆಗಳು ಸಹ ನಡೆದಿದ್ದು. ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಸಾಲದ ಸುಳಿಯಲ್ಲಿ ಸಿಲುಕಿ ಕಿರುಕುಳ ಅನುಭವಿಸುತ್ತಿರುವವರು ಪಾಡು ಕೇಳುವವರೇ ಇಲ್ಲದಂತಾಗಿದೆ’ ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದುಕೊಳ್ಳುತ್ತಿರುವವರು ಬಹುತೇಕರು ಬಡವರು, ದಿನಗೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಕೃಷಿ ಕಾರ್ಮಿಕರು, ಸಣ್ಣ ರೈತರೇ ಆಗಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಗೃಹ ಇಲಾಖೆ, ಹಣಕಾಸು ಇಲಾಖೆ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಒಂದು ಜಂಟಿ ಸಮಿತಿ ರಚಿಸಿ ಆ ಮೂಲಕ ಈ ಅಮಾಯಕ ಬಡ ಕುಟುಂಬಗಳನ್ನು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರಕ್ಷಿಸುವ ಮಾರ್ಗೋಪಾಯ ಕಂಡುಕೊಳ್ಳಬೇಕು ಮತ್ತು ಕೇಂದ್ರ ಹಣಕಾಸು ಇಲಾಖೆ ಹಾಗೂ ಆರ್​ಬಿಐ ಜತೆ ಚರ್ಚಿಸಿ ಮೈಕ್ರೋ ಫೈನಾನ್ಸ್ ಕಂಪನಿಗಳ ದಬ್ಬಾಳಿಕೆ ನಿಯಂತ್ರಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಸಿಎಂಗೆ ಒತ್ತಾಯಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *