Breaking News

ಬೆಂಬಲ ಬೆಲೆಯಡಿ ತೊಗರಿ ಖರೀದಿ ಕೇಂದ್ರ ಆರಂಭ; ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ: ಡಿಸಿ ಫೌಜಿಯಾ ತರನ್ನುಮ್

ಕಲಬುರಗಿ : ಜಿಲ್ಲೆಯಾದ್ಯಂತ ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಆರಂಭವಾಗಿದ್ದು, ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರಗಳನ್ನು ಗುರುತಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.
ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ ಎಫ್.ಎ.ಕ್ಯೂ. ಗುಣಮಟ್ಟದ 3,06,150 ಮೆಟ್ರಿಕ್ ಟನ್ ತೊಗರಿ ಖರೀದಿಗೆ ಸರಕಾರ ಆದೇಶಿಸಿದೆ ಎಂದಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 177 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ರೈತ ಉತ್ಪಾದಕ ಸಂಘಗಳಲ್ಲಿ ತೊಗರಿ ಖರೀದಿಗೆ ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಖರೀದಿಗೆ 134 ಕೇಂದ್ರ ಮ್ಯಾಪಿಂಗ್ ಆಗಿದ್ದು, ಇನ್ನುಳಿದ 43 ಕೇಂದ್ರ ತುರ್ತಾಗಿ ಮ್ಯಾಪಿಂಗ್ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಖರೀದಿಸಲಾಗುತ್ತದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಡಿಸಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.
ಇನ್ನು ನ್ಯಾಫೆಡ್ ನಿಂದ ತೊಗರಿ ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದ್ದು, ರೈತ ಬಾಂಧವರು ಇದರ ಲಾಭ ಪಡೆಯಬೇಕೆಂದು ಡಿಸಿ ಅವರು ಮನವಿ ಮಾಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *