Breaking News

ಬೀದರ್: ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ

ಔರಾದ್: ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.
ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂ ಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಸಾರ್ವಜನಿಕರು ಅಭಿಯಾನದ ಪ್ರಯೋಜನ ಪಡೆದು ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಎನ್.ಬಿ.ರೆಡ್ಡಿ ಗುರೂಜಿ, ತಹಶೀಲ್ದಾರ್ ಡಿ.ಜಿ.ಮಹಾತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ ಪೋಗಲ್, ಪ್ರಮುಖರಾದ ಗುರುನಾಥ ರಾಜಗೀರಾ, ರಾಜರೆಡ್ಡಿ ಶಹಾಬಾದ್, ಸುರೇಶ ಮಾಶೆಟ್ಟಿ, ಸೂರ್ಯಕಾಂತ ಸೇಡಂ ಹಾಗೂ ನರಸಿಂಹರೆಡ್ಡಿ ಗಂಗ್ವಾರ್ ಉಪಸ್ಥಿತರಿದ್ದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *