ಪಣಜಿ: ಗೋವಾದಲ್ಲಿ ನಿರ್ಮಾಣ ಮಾಡಲಾಗಿರುವ ದೇಶದ ಮೊದಲ ಬಾಗಿದ ಕೇಬಲ್ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ಉದ್ಘಾಟಿಸಲಿದ್ದಾರೆ. ಇದಲ್ಲದೇ 2500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಕೇಬಲ್ ಸೇತುವೆ 180 ಡಿಗ್ರಿ ಬಾಗಿದ್ದು, ಸದಾ, ವರುಣಪುರಿ ಮತ್ತು ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇರಿಸುತ್ತದೆ.
ಜೊತೆಗೆ 4 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೂ ಚಾಲನೆ ನೀಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

