Breaking News

ಜ.24 ರಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ

ಕೊಪ್ಪಳ: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷ ವಯೋಮಾನದ ಆಸಕ್ತ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಾಕ್ ಇನ್ ಸಂದರ್ಶನ ಜನವರಿ 24ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಯವರು ಭಾಗವಹಿಸಿ, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಅರ್ಹ ಪಿಯುಸಿ ಅಥವಾ ತತ್ಸಮಾನ, ಯಾವುದೇ ಪದವಿ (ಬಿಇ ಹೊರತುಪಡಿಸಿ) ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 30 ವರ್ಷಗಳು. ಆಸಕ್ತ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಆಧಾರ್ ಕಾರ್ಡ್ ಪ್ರತಿ, ಬಯೋಡೆಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539-220859.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *