Breaking News

ನಾಳೆ(ಜ.23) ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಕನ್ನಡದ ಚಿನ್ನ-2024 ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜ.23ರ ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ 2024ನೇ ಸಾಲಿನ ‘ಕನ್ನಡ ಚಿನ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಕನ್ನಡ ನಾಡು-ನುಡಿ, ನೆಲ-ಜಲಗಳ ತುಡಿತ ಹೊಂದಿರುವ ಮತ್ತು ಮಾತೃ ಭಾಷೆಯ ಕಳಕಳಿಯನ್ನು ಹೊಂದಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರನ್ನು ಕನ್ನಡದ ಚಿನ್ನ-2024 ಗೌರವ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತಿದೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಎಸ್ ಅಪ್ಪಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಧರ್ಮರಾಜ ಜವಳಿ, ವಿದ್ಯಾಸಾಗರ ದೇಶಮುಖ, ಸಿದ್ಧಲಿಂಗ ಜಿ ಬಾಳಿ ವೇದಿಕೆ ಮೇಲಿರುವರು ಎಂದು ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *